ಅಕಾಲಿಕ ಮಳೆಯಿಂದ ಕಾಫಿ,ಕಾಳುಮೆಣಸು ಬೆಳೆಗಾರರಲ್ಲಿ ಆತಂಕ

ವಾಯುಭಾರ ಕುಸಿತದ ಪರಿಣಾಮ ಕೊಡಗು,ಚಿಕ್ಕಮಗಳೂರು,ಹಾಸನ ಜಿಲ್ಲೆಯ ಮೇಲೂ ಆಗಿದ್ದು,ಜಿಲ್ಲೆಯ ಬಹುತೇಕ ಕಡೆಗಳಲ್ಲಿ ರವಿವಾರ ಅಪರಾಹ್ನದಿಂದ ಮಳೆಯಾಗುತ್ತಿದೆ.

Also read  Wait few more days for the Monsoon to reach Karnataka

ಜಿಲ್ಲೆಗಳ ಕಾಫಿ ತೋಟಗಳಲ್ಲಿ ಕೊಯ್ಲು ನಡೆಯುತ್ತಿದ್ದು ಬೆಳೆಗಾರರು ಕೊಯ್ದು ಕಾಫಿಯನ್ನು ಒಣಗಿಸಲು ಪರದಾಡುವಂತಾಗಿದೆ. ಬಿಸಿಲಿನ ಅಭಾವದಿಂದ ಒಣಗಿಸುವುದು ಹೇಗೆಂಬ ಬೆಳೆಗಾರರ ಚಿಂತೆಯನ್ನು ಸುರಿದ ಮಳೆ ಮತ್ತಷ್ಟು ಉಲ್ಬಣಿಸುವಂತೆ ಮಾಡಿದೆ.

ಕಳೆದ 24 ಗಂಟೆಗಳ ಮಳೆ

ಪ್ರಸಕ್ತ ಸಾಲಿನ ಮಹಾಮಳೆಯಿಂದಾಗಿ ಈಗಾಗಲೇ ಕಾಫಿ, ಕರಿಮೆಣಸು ಸೇರಿದಂತೆ ವಾಣಿಜ್ಯ ಬೆಳೆಗಳು ಕೈಕೊಟ್ಟಿದ್ದು, ಅದೃಷ್ಟವಶಾತ್‌ ಉಳಿದಿದ್ದ ಅಲ್ಪಸ್ವಲ್ಪ ಬೆಳೆಯೂ ಅಕಾಲಿಕ ಮಳೆಯಿಂದಾಗಿ ಕೈತಪ್ಪುವುದರೊಂದಿಗೆ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬ ಭೀತಿ ಎದುರಾಗಿದೆ.

Also read  Black Pepper -Weekly Insects Pests & Diseases Report – 28 Sep-04 Oct 2017