ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ:ಕೇರಳ ಮತ್ತು ಕರ್ನಾಟಕದ ಹಲವೆಡೆ ಭಾರಿ ಮಳೆಯ ಮುನ್ನೆಚ್ಚರಿಕೆ

ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ: ಭಾರಿ ಮಳೆಯ ಮುನ್ನೆಚ್ಚರಿಕೆ

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಲಕ್ಷದ್ವೀಪದ ಬಳಿ ವಾಯುಭಾರ ಕುಸಿತ ಉಂಟಾಗಿದ್ದು, ಕೇರಳ ಮತ್ತು ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Also read  ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸು

ಲಕ್ಷದ್ವೀಪಕ್ಕೆ ಹೊಂದಿಕೊಂಡಂತೆ ಅರಬ್ಬಿ ಸಮುದ್ರದ ಆಗ್ನೇಯ ಭಾಗ ಮತ್ತು ಮಧ್ಯ ಪೂರ್ವ ಭಾಗದಲ್ಲಿ ವಾಯುಭಾರತದ ಕುಸಿತದ ಕೇಂದ್ರವಿದೆ. ಮುಂದಿನ 24 ಗಂಟೆಗಳಲ್ಲಿ ಅದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯೂ ಇದೆ. ಗುರುವಾರದವರೆಗೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಭಾನುವಾರ ಪ್ರತಿ ಗಂಟೆಗೆ 45ರಿಂದ 55 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ ಎರಡು ದಿನಗಳಲ್ಲಿ ಗಾಳಿಯ ವೇಗ 90ರಿಂದ 110 ಕಿ.ಮೀ.ವರೆಗೂ ತಲುಪಬಹುದು. ಕರಾವಳಿಯಲ್ಲಿ ಐದು ದಿನಗಳ ಕಾಲ ಮತ್ತು ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳ ಕಾಲ ಭಾರಿ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಭಾನುವಾರ ಮಧ್ಯಾಹ್ನ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.

ವರದಿ:ಪ್ರಜಾವಾಣಿ

Also read  ದಾಖಲೆ ದರದತ್ತ ಶುಂಠಿ ಬೆಳೆ