ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಬೀಳಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮ್ಯಾಟ್‌ ಹೇಳಿದೆ.ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆ ನಗರದಲ್ಲಿ ಅವಾಂತರಗಳನ್ನು ಸೃಷ್ಟಿಸುತ್ತಲೇ ಇದೆ.

ಗುರುವಾರ ರಾತ್ರಿ ಬಂದ ಬಿರುಗಾಳಿ ಮಳೆಗೆ ನಗರದ ಹಲವೆಡೆ ಬೃಹತ್‌ ಮರಗಳು ಹಾಗೂ ವಿದ್ಯುತ್‌ ಕಂಬಗಳು ನೆಲಕ್ಕೊರಗಿವೆ. ಕಾರು, ಆಟೋ, ಬೈಕ್‌ ಸೇರಿದಂತೆ ಹಲವು ವಾಹನಗಳು ಹಾನಿಗೊಳಗಾಗಿವೆ. ಇದಾದ ಬೆನ್ನಲ್ಲೇ ಮತ್ತೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

Also read  ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ 24ರಿಂದ 48 ಗಂಟೆಗಳವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ ಇದೆ.

Also read  ಆಗಸ್ಟ್‌ನಲ್ಲಿ ಶ್ರೀಲಂಕಾ ಮೂಲಕ 700ಟನ್‌ ಕಾಳುಮೆಣಸು ಆಮದು