‘ಕ್ಯಾರ್ ಚಂಡಮಾರುತ’:ಕಡಲ ಅಬ್ಬರ,ಉಡುಪಿ,ಚಿಕ್ಕಮಗಳೂರು,ಕೊಡಗು ಮಳೆ

ಅರಬ್ಬೀ ಸಮುದ್ರ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ  ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ.ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಗ ರೆಡ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಗಳಲ್ಲಿ ಕ್ಯಾರ್ ಚಂಡಮಾರುತ ಬೀಸುವ ಸಾಧ್ಯತೆ ಇರುವುದರಿಂದ ಶಾಲೆ ಮತ್ತು ಪಿ.ಯು.ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.

Also read  ಮಂಡ್ಯ,ಮೈಸೂರು,ಬೆಂಗಳೂರು ಸುತ್ತಮುತ್ತ ಭಾರಿ ಮಳೆ ಸಾಧ್ಯತೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ವಿವಿಧೆಡೆ ರಾತ್ರಿ ಮಳೆಯಾಗಿದ್ದು,ಮೂಡಿಗೆರೆ ತಾಲೂಕಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.ಕಳಸ ಭಾಗದಲ್ಲಿ ತೋಟಗಳಲ್ಲಿ ಮರಗಳು ಧರೆಗುರುಳಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿಕೊಂಡು ಹರಿಯುತ್ತಿವೆ.

ಕೊಡಗು ಜಿಲ್ಲೆಯಲ್ಲೂ ದಟ್ಟ ಮೋಡ ಕವಿದ ವಾತಾವರಣವಿದ್ದು ಬೆಳಿಗ್ಗೆಯಿಂದಲೂ ಸಾಧಾರಣ ಮಳೆಯಾಗುತ್ತಿದೆ. ಮಡಿಕೇರಿ, ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ಮಳೆಯಾಗುತ್ತಿದ್ದು,ಥಂಡಿ ಗಾಳಿ ಹಾಗೂ ಮೈಕೊರೆಯುವ ಚಳಿಯಿದೆ.

Also read  Chidambaram angry over prices of coffee at airport