Featured NewsWeather

ಕೇರಳಕ್ಕೆ ಮುಂಗಾರು ಪ್ರವೇಶ

ನೈಋತ್ಯ ಮುಂಗಾರು ಮಾರುತ ಅಧಿಕೃತವಾಗಿ ಕೇರಳ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ತಿಳಿಸಿದ್ದಾರೆ.

ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಕೆಲವೇ ದಿನಗಳಲ್ಲಿ ಕರ್ನಾಟಕದ ಕರಾವಳಿಗೂ ಮುಂಗಾರು ಮಳೆ ಆಗಮಿಸುತ್ತವೆ.

ಕಳೆದ 24 ಗಂಟೆಗಳಲ್ಲಿ ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ . ಕೊಯಿಕೋಡ್‌ನಲ್ಲಿ 9 ಸೆಂ.ಮೀ ಮಳೆಯಾಗಿದೆ ಮತ್ತು ಕೊಯಿಕೋಡ್‌ನ ವಡಕಾರದಲ್ಲಿ 15 ಸೆಂ.ಮೀ ಮಳೆಯಾಗಿದೆ ಇದು ಕೇರಳದಲ್ಲಿ ಗರಿಷ್ಠವಾಗಿದೆ. ಈ ಮಧ್ಯೆ ತಿರುವನಂತಪುರದಲ್ಲಿ 6 ಸೆಂ.ಮೀ ಮಳೆಯಾಗಿದೆ.

Also read  Destruction - In the name of urbanization

ಇದೇ ವೇಳೆ ಅರಬ್ಬೀ ಸಮುದ್ರದಲ್ಲಿ ಕಡಿಮೆ ಒತ್ತಡ ಪ್ರದೇಶ ಸೃಷ್ಟಿಯಾಗಿದ್ದು, ಇದು ಮುಂದಿನ ದಿನಗಳಲ್ಲಿ ಪ್ರಬಲ ಚಂಡಮಾರುತವಾಗಿ ರೂಪುಗೊಂಡು ಜೂನ್‌ 3ರ ವೇಳೆಗೆ ಉತ್ತರ ಮಹಾರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನ ತೀರಗಳ ಮೇಲೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.