ರಾಜ್ಯದಲ್ಲಿ ಮಳೆ ಸಾಧ್ಯತೆ

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಮಂಗಳವಾರ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

‘ಮಂಡ್ಯ, ಮೈಸೂರು, ಚಿಕ್ಕಮಗಳೂರು ಹಾಗೂ ಹಾಸನ ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ’ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್‌.ಶ್ರೀನಿವಾಸ ರೆಡ್ಡಿ ತಿಳಿಸಿದರು.

‘ಸೋಮವಾರ, ಕೊಡಗು 50, ಹಾಸನ ಹಾಗೂ ಚಿಕ್ಕಮಗಳೂರಿನ ವಿವಿಧೆಡೆ 10ರಿಂದ 12ಮೀ.ಮೀ ಪ್ರಮಾಣದ ಮಳೆಯಾಗಿದೆ’. ಆದರೆ, ಉತ್ತರ ಕರ್ನಾಟಕ ಭಾಗದ ಬಳ್ಳಾರಿ, ಕೊಪ್ಪಳ 39, ಕಲಬುರ್ಗಿ 38.5, ರಾಯಚೂರು 40 ಸೇರಿದಂತೆ ವಿವಿಧೆಡೆ 36 ರಿಂದ 37 ಡಿಗ್ರಿ ಸೆಲ್ಸಿಯಸ್‌ ಗರಿಷ್ಟ ತಾಪಮಾನ ದಾಖಲಾಗಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದರು.

‘ಮೇಲ್ಮೈ ಸುಳಿಗಾಳಿಯಿಂದಾಗಿ ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕಳೆದ ಮೂರು ದಿನಗಳಲ್ಲಿ ಇದ್ದ ಗರಿಷ್ಟ ತಾಪಮಾನಕ್ಕೆ ಹೋಲಿಸಿದರೆ ಸದ್ಯ ಇಳಿಕೆ ಕಂಡಿದೆ.

Also read  IMD forecasts heavy rains in parts of Karnataka tomorrow