ಕರಾವಳಿಯಲ್ಲಿ ಮೂರು ದಿನ ಭಾರಿ ಮಳೆ:ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ ಬೀಳಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Also read  Falling pepper prices hits coffee growers further

ಕರಾವಳಿ ಜೊತೆಗೆ ಅದಕ್ಕೆ ಹತ್ತಿರದ ಘಟ್ಟ ಪ್ರದೇಶದಲ್ಲಿಕೂಡ ಮುಂದಿನ ಮೂರು ದಿನ ಭಾರಿ ಮಳೆ ಸುರಿಯಲಿದೆ.

ಜಿಲ್ಲೆಗಳಾದ ಮಡಿಕೇರಿ,ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿಯಲ್ಲಿ ನೈರುತ್ಯ ದಿಕ್ಕಿಗೆ ಪ್ರತಿ ಗಂಟೆಗೆ 40ರಿಂದ 50 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುತ್ತಿದೆ. ಮುಂದಿನ ಮೂರು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

Also read  End of Arabica? 60% of coffees at risk of extinction

ಹಾಸನ ನಗರ ಮತ್ತು ಸುತ್ತಮುತ್ತ ಹಾಗೂ  ಸಕಲೇಶಪುರ ತಾಲ್ಲೂಕಿನ್ಯಾದ್ಯಂತ ಮಂಗಳವಾರ ಮಧ್ಯಾಹ್ನ ಬಿರಿಸಿನ ಮಳೆಯಾಗಿದೆ.

ಇನ್ನೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಬಯಿ ನಗರ, ಉಪನಗರ ಪ್ರದೇಶಗಳಲ್ಲಿ ಹಾಗೂ ಕೊಂಕಣ್ ವ್ಯಾಪ್ತಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹೇಳಲಾಗಿದೆ.

Also read  Coffee Prices(Chikmagalur) on 08-09-2018