ಬೆಂಗಳೂರು,ಮೈಸೂರು,ಮಲೆನಾಡು,ಕರಾವಳಿಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ

ಕರ್ನಾಟಕದ ಕರಾವಳಿಯ ಮೇಲ್ಮೈವಾಯು ಪರಿಚಲನೆಯ ಪರಿಣಾಮ ಬೆಂಗಳೂರು,ಮೈಸೂರು,ಮಲೆನಾಡು,ಕರಾವಳಿಯಲ್ಲಿ ಮಳೆ ಇನ್ನೂ ಎರಡು ದಿನಗಳವರೆಗೆ ಮುಂದುವರಿಯುವ ಸಾಧ್ಯತೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು,ಮಂಡ್ಯ,ಮೈಸೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ. 

Also read  ನವೆಂಬರ್15 ರಿಂದ 18ರವರೆಗೆ ಬೆಂಗಳೂರು ಕೃಷಿ ಮೇಳ

ಇನ್ನೂ ಮಲೆನಾಡು,ಕರಾವಳಿಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ.

ಕೊಡಗು ಜಿಲ್ಲೆಯ ಭಾಗಮಂಡಲ, ನಾಪೋಕ್ಲು, ತಲಕಾವೇರಿ, ಅಪ್ಪಂಗಳ ಸುತ್ತಮುತ್ತ  ಸೋಮವಾರ ಬೆಳಿಗ್ಗೆ ಮಳೆಯಾಗಿದೆ. ಕುಶಾಲನಗರ,ಮೈಸೂರುನಲ್ಲಿ ಇಂದು ಮಧ್ಯಾಹ್ನ  ಉತ್ತಮ ಮಳೆಯಾಗಿದೆ. 

ಚಾಮರಾಜನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೋಮವಾರ ಸಂಜೆ ವರ್ಷದ ಮೊದಲ ಮಳೆ ಸುರಿದಿದೆ.

ಮಲೆನಾಡು ಪ್ರದೇಶ ಶಿವಮೊಗ್ಗ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ.

ಮಾರ್ಚ್ 5 ನಂತರ ಮಳೆ ಹೆಚ್ಚಾಗುವ ಸಾಧ್ಯತೆ

ಈ ಮಳೆ ಮಾರ್ಚ್‌ 5ರ ನಂತರ ಹೆಚ್ಚಾಗುವ ಸಾಧ್ಯತೆ ಇದೆ. ಛತ್ತೀಸ್‌ಗಡ್‌ ಕಡೆಯಿಂದ ಮಳೆ ಮಾರುತಗಳು ಕರ್ನಾಟಕದ ಕಡೆ ಬರುತ್ತಿರುವುದು ಮಳೆ ಸುರಿಯುವುದಕ್ಕೆ ಕಾರಣವಾಗಿದೆ. ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮಳೆ ವಾತಾವರಣ ಸೃಷ್ಟಿಯಾಗಿದೆ ಎನ್ನಲಾಗಿದೆ.

ಮಾರ್ಚ್‌ 5 ಮತ್ತು 7ರ ನಡುವೆ ರಾಜ್ಯ ಸೇರಿ ಆಂಧ್ರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ಎರಡು ದಿನಗಳಿಂದ ಮೋಡ ಮುಸುಕಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ.

Leave a Reply