ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿವ ಸಾಧ್ಯತೆ:ಕೊಡಗಿನಲ್ಲಿ‘ರೆಡ್‌ ಅಲರ್ಟ್‌’ ಘೋಷಣೆ

ಕಡಲಾಚೆಯ ಟ್ರಫ್‌ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರದಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮದಿಂದ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಮುಂದಿನ 3-4 ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಪ್ರೊ.ಎಸ್‌.ಎಸ್‌.ಎಂ.ಗಾವಸ್ಕರ್‌ ತಿಳಿಸಿದ್ದಾರೆ.

ಉತ್ತರ ಕರ್ನಾಟದ ಕೆಲವು ಜಿಲ್ಲೆಗಳಲ್ಲಿ ಪ್ರಸ್ತುತ ಮಳೆಯಾಗುತ್ತಿದ್ದು, ದಕ್ಷಿಣ ಭಾಗದಲ್ಲಿಯೂ ಮುಂಗಾರು ಚುರುಕುಗೊಳ್ಳಲಿದೆ.ಈ ನಡುವೆ ಸಮುದ್ರಕ್ಕಿಳಿಯುವ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ದಿನಾಂಕ:05-08-2019 ರಿಂದ 07-08-2019 ರ ಬೆಳಿಗ್ಗೆವರೆಗೆ ಆರೆಂಜ್‌ ಅಲರ್ಟ್‌ (115.6 ಮಿ.ಮೀ. ನಿಂದ 204.4 ಮಿ.ಮೀ.ವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ) ಮತ್ತು ದಿನಾಂಕ:07-08-2019 ರಿಂದ 09-08-2019 ರ ಬೆಳಿಗ್ಗೆವರೆಗೆ ರೆಡ್‌ ಅಲರ್ಟ್‌ (204.4 ಮಿ.ಮೀ.ಗಿಂತ ಅಧಿಕ ಮಳೆ ಬೀಳುವ ಸಾಧ್ಯತೆ )ಹಾಗೂ ದಿ:09-08-2019 ಬೆಳಿಗ್ಗಿನಿಂದ ದಿನಾಂಕ:10-08-2019 ರ ಬೆಳಿಗ್ಗೆವರೆಗೆ ಪುನ: ಆರೆಂಜ್‌ ಅಲರ್ಟ್‌ ಘೋಷಣೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ  ಕೊಡಗು ಜಿಲ್ಲೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ .

ಆದ್ದರಿ೦ದ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿ೦ದಿರಲು ಜಿಲ್ಲಾಡಳಿತ ಮನವಿ ಮಾಡುತ್ತದೆ.ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಈ ಪ್ರಕಟಣೆಯನ್ನು ಸಾರ್ವಜನಿಕರ ಮತ್ತು ಪ್ರವಾಸಿಗರ
ಹಿತದೃಷ್ಠಿಯಿ೦ದ ಹೊರಡಿಸಲಾಗಿದೆ.

Also read  Heavy Rainfall damages 70% Coffee in Karnataka

ದಕ್ಷಿಣ ಕೊಡಗು ಭಾಗದಲ್ಲಿ ಭಾನುವಾರ ರಾತ್ರಿಯಿಡೀ ಭಾರಿ ಮಳೆ ಸುರಿದಿದೆ.ಕೇರಳಕ್ಕೆ ಸಂಪರ್ಕ ಕಲ್ಪಿಸುವ ಪೆರುಂಬಾಡಿ – ಮಾಕುಟ್ಟ ಅಂತರ ರಾಜ್ಯ ಹೆದ್ದಾರಿಯ ವಾಟೆಕೊಲ್ಲಿ ಎಂಬಲ್ಲಿ ರಸ್ತೆ ಕುಸಿದು ವಾಹನ ಸಂಚಾರ ಬಂದ್‌ ಆಗಿದೆ.ಹೆದ್ದಾರಿ ಕುಸಿದ ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌ ಭೇಟಿ ನೀಡಿ ಪರಿಶೀಲಿಸಿದರು. ಶೀಘ್ರವೇ ಎಂ–ಸ್ಯಾಂಡ್‌ ಚೀಲ ಬಳಸಿ ತಾತ್ಕಾಲಿಕ ರಸ್ತೆ ನಿರ್ಮಿಸಿ ವಾಹನ ಸಂಚಾರಕ್ಕೆ ಅನುವು ಮಾಡಲಾಗುವುದು ಎಂದು ಭರವಸೆ ನೀಡಿದರು.

ನಿರಂತರ ಮಳೆಗೆ ಭಾಗಮಂಡಲ ಜಲಾವೃತವಾಗಿದೆ. ತ್ರಿವೇಣಿ ಸಂಗಮದಲ್ಲಿ ಅಪಾರ ನೀರು ಸಂಗ್ರಹವಾಗಿದೆ. ಸೋಮವಾರ ಮಧ್ಯಾಹ್ನವರೆಗೂ ಭಾಗಮಂಡಲ– ನಾಪೋಕ್ಲು ರಸ್ತೆಯ ಮೇಲೆ ಕಾವೇರಿ ನೀರು ಹರಿಯುತ್ತಿತ್ತು. ಮಧ್ಯಾಹ್ನದ ಬಳಿಕ ಮಳೆಯ ಅಬ್ಬರ ಕೊಂಚ ತಗ್ಗಿದ್ದು ನೀರಿನಮಟ್ಟ ಇಳಿಕೆಯಾಗಿದೆ. ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳಲ್ಲಿ ನೀರಿನ ಮಟ್ಟ ಹಚ್ಚಳವಾಗಿದೆ.

Rainfall Forecast (Next 24Hrs): Widespread heavy to very heavy rains likely over Coastal Karnataka & moderate to heavy rains likely over adjoining parts of Malnad & Interior Karnataka districts & Isolated to scattered light to moderate Karnataka districts.