ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದ ವಿವಿಧೆಡೆ ಜೂನ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿರುವ ಮೇಲ್ಮೈ ಸುಳಿಗಾಳಿ ಹಾಗೂ ಗಾಳಿಯ ಒತ್ತಡ ಕಡಿಮೆಯಿದೆ. ಇದರೊಂದಿಗೆ ಮುಂಗಾರು ಪ್ರವೇಶಿಸಲು ಅಗತ್ಯ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Also read  Black pepper prices slips on selling pressure

ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಕೋಲಾರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆ ಯಲಿದೆ. ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸಲಿದ್ದು, ಕಡಲ ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮೇಲ್ಮೈ ಸುಳಿಗಾಳಿ ಹಾಗೂ ಗಾಳಿಯ ಒತ್ತಡ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಕೋಲಾರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಜೂನ್ 10ರವರೆಗೂ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಸೂಚನೆ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ.

Also read  Rain forecast:Light to moderate rains likely over coastal & Malnad districts