ಮಂಡ್ಯ,ಮೈಸೂರು,ಬೆಂಗಳೂರು ಸುತ್ತಮುತ್ತ ಭಾರಿ ಮಳೆ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು,ಬಿರುಗಾಳಿ ಸಹಿತ ಭಾರಿ  ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ

ಮಲೆನಾಡು,ಕರಾವಳಿ  ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಬುಧವಾರ ಮತ್ತು ಗುರುವಾರ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು,ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

Also read  Met says ‘active’ monsoon conditions may last for another week

ಮಂಡ್ಯ,ಮೈಸೂರು,ರಾಮನಗರ,ಹಾಸನ,ಚಾಮರಾಜನಗರ,ಬೆಂಗಳೂರು ಸುತ್ತಮುತ್ತ ಭಾರಿ ಮಳೆ ಸಾಧ್ಯತೆಯಿದೆ  ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು,ಹಾಸನ,ಕೊಡಗು,ಶಿವಮೊಗ್ಗ,ಬೆಂಗಳೂರ ಗ್ರಾಮಾಂತರ,ಚಿಕ್ಕಬಳ್ಳಾಪುರ,ತುಮಕೂರು ಜಿಲ್ಲೆಗಳಲ್ಲಿ ಗುಡುಗು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯ ಮಂಗಳೂರು,ಉಡುಪಿ,ಕಾರವಾರ ಮೊದಲಾದ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಹಾಗೂ ನಾಳೆ ಕೂಡ ಮಳೆ ಸಾದ್ಯತೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ನಾಳೆ ಕೂಡ ಗುಡುಗು ಸಿಡಿಲು ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Also read  ಇನ್ನೂ ಮುಂದೆ ಕಾಫೀ ಕುಡಿದು ಓಡಾಡ್ತವಂತೆ ಬಸ್ಸುಗಳು