ಮಡಿಕೇರಿ:ಬಿತ್ತನೆ ಕಾಫಿ ಬೀಜಕ್ಕೆ ಆಸಕ್ತ ಕಾಫಿ ಬೆಳೆಗಾರರಿಂದ ಅರ್ಜಿ ಆಹ್ವಾನ
ಪ್ರಸಕ್ತ ವರ್ಷ 2022-23ನೇ ಸಾಲಿನ ಬಿತ್ತನೆ ಕಾಫಿ ಬೀಜಕ್ಕೆ ಆಸಕ್ತ ಕಾಫಿ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿತ್ತನೆ ಬೀಜಕ್ಕೆ ಅರ್ಜಿಸಲ್ಲಿಸಲಿಚ್ಚಿಸುವ ಆಸಕ್ತ ಕಾಫಿ ಬೆಳೆಗಾರರು ಮಂಡಳಿಯ ಕಚೇರಿಯಲ್ಲಿ ದೊರೆಯುವ ಅರ್ಜಿ ಭರ್ತಿ ಮಾಡಿ ಪ್ರತಿ ಕೆಜಿ ಬಿತ್ತನೆ ಬೀಜಕ್ಕೆ ರೂ.400 ನ್ನು ಮುಂಗಡವಾಗಿ ಪಾವತಿಸಿ ತಮ್ಮ ಹೆಸರನ್ನು ನೋಂದಾಯಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಕಾಫಿ ಮಂಡಳಿ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಗೋಣಿಕೊಪ್ಪಲು ಕಾಫಿ ಮಂಡಳಿಯ ಉಪ ನಿರ್ದೇಶಕರು ತಿಳಿಸಿದ್ದಾರೆ.