Featured NewsKrushi

ಬಜೆಟ್ 2019: ಸಣ್ಣ ರೈತರ ಖಾತೆಗೆ ₹6 ಸಾವಿರ ,ವಿವರ ಹೀಗಿದೆ

2019-20 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಕೇಂದ್ರ ಸರ್ಕಾರ ರೈತರಿಗೆ ಬಂಪರ್ ಕೊಡುಗೆ ನೀಡಿದೆ. 
ಸಣ್ಣ ಹಿಡುವಳಿದಾರರಿಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ರೈತರ ಖಾತೆಗೆ ವಾರ್ಷಿಕ ₹6,000 ಬರಲಿದೆ.

ಏನಿದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ?

‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ ಅಡಿ 2 ಹೆಕ್ಟೇರ್‌ಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ ಈ ಸೌಲಭ್ಯ ದೊರೆಯಲಿದೆ.
ಈ ಯೋಜನೆ ಅಡಿ ₹6,000 ಮೂರು ಕಂತುಗಳಲ್ಲಿ ತಲಾ ₹2,000ದಂತೆ ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ಕೇಂದ್ರ ಸರ್ಕಾರ ಜಮೆ ಮಾಡಲಿದೆ.
Also read  ಬೆಂಗಳೂರಿನ ಜಿಕೆವಿಕೆಯಲ್ಲಿ ಇಂದಿನಿಂದ ಕೃಷಿ ಮೇಳ
ಪ್ರತಿ ಬಾರಿ 2 ಸಾವಿರ ರೂಪಾಯಿಯಂತೆ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ಹಣ ವರ್ಗಾವಣೆ. ಈ ಯೋಜನೆಯಿಂದ 12 ಕೋಟಿ ರೈತರಿಗೆ ಲಾಭ ಯೋಜನೆಗಾಗಿ 75,000 ರೂ ಮೀಸಲು.

Leave a Reply