Featured NewsWeather

ಕರ್ನಾಟಕದ ಕರಾವಳಿ,ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ,ದಕ್ಷಿಣ ಒಳನಾಡು ಮತ್ತು ಕೇರಳದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮಧ್ಯ ಮಹಾರಾಷ್ಟ್ರ, ಕೊಂಕಣ, ಗೋವಾ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ, ಉತ್ತರ ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡು ಮತ್ತು ಪುದುಚೇರಿಗಳ ಹಲವೆಡೆ ಮಳೆಯಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Also read  ಹವಾಮಾನ ವೈಪರೀತ್ಯದಿಂದ ಅರೇಬಿಕ ಕಾಫಿಗೆ ಕೊಳೆ ರೋಗ - ಆತಂಕದಲ್ಲಿ ಬೆಳೆಗಾರರು

ಪೂರ್ವ ಭಾರತ ಮತ್ತು ಈಶಾನ್ಯ ಭಾರತ ದಕೆಲವು ಭಾಗಗಳು ಸಹ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಗುರುವಾರದಿಂದ ಭಾನುವಾರದವರೆಗೆ ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಶನಿವಾರದವರೆಗೆ ಮತ್ತು ಕರಾವಳಿ ಹಲವೆಡೆ ಗುರುವಾರ ಮತ್ತು ಶುಕ್ರವಾರ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಶುಕ್ರವಾರ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ತಿಳಿಸಿದೆ.

ಕರಾವಳಿಯಲ್ಲಿ ಗುರುವಾರ ಶುಕ್ರವಾರ ಭಾರಿ ಮಳೆ ಸಾಧ್ಯತೆ.ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಹಾಗೂ ಶುಕ್ರವಾರ ಭಾರಿ ಮಳೆ ಸುರಿಯುವ ನಿರೀಕ್ಷೆ ಇದ್ದು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.ಭಾರತೀಯ ಹವಾಮಾನ ಇಲಾಖೆ ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

Also read  ಸೋಮವಾರಪೇಟೆ:ಕಾಫಿ ಗಿಡಗಳಿಗೆ ಭಾರಿ ಹಾನಿ