Featured NewsKrushi

ಬೆಂಗಳೂರಿನ ಜಿಕೆವಿಕೆಯಲ್ಲಿ ಇಂದಿನಿಂದ ಕೃಷಿ ಮೇಳ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಜಿಕೆವಿಕೆ ಆವರಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕೃಷಿ ಮೇಳ ನೆಡೆಯಲಿದೆ. 

ಗುರುವಾರ ಬೆಳಿಗ್ಗೆ 11ಕ್ಕೆ ಮೇಳಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಚಾಲನೆ ನೀಡಲಿದ್ದಾರೆ.ಪ್ರತಿನಿತ್ಯ ಬೆಳಿಗ್ಗೆ 9ರಿಂದ ಸಂಜೆ 6ರ ತನಕ ಸಾರ್ವಜನಿಕರಿಗೆ ಮೇಳಕ್ಕೆ ಉಚಿತ ಪ್ರವೇಶವಿದೆ. 

ಜಿ.ಕೆ.ವಿ.ಕೆ ಮಹಾದ್ವಾರದಿಂದ ಕೃಷಿ ಮೇಳದ ಸಭಾಂಗಣ ತಲುಪಲು ಬಸ್ಸುಗಳಲ್ಲಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು ನಾಲ್ಕು ದಿನಗಳಿಂದ 15 ಲಕ್ಷ ಜನರು ಕೃಷಿ ಮೇಳ ವೀಕ್ಷಿಸುವ ಸಾಧ್ಯತೆಯಿದೆ. ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಜಿ.ಕೆ.ವಿ.ಕೆ ಮುಂಭಾಗದ ಜಕ್ಕೂರು ಏರೋಡ್ರಮ್‌ನಲ್ಲಿ (ವಿಮಾನ ನಿಲ್ದಾಣ) ಬಸ್‌, ಮಿನಿ ಬಸ್‌, ಟೆಂಪೋ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. 
ಮೇಳದ ವೀಕ್ಷಕರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಕೃಷಿ ವಿವಿ ತಿಳಿಸಿದೆ. 
ಚರ್ಮಗಂಟು ರೋಗದ ಕಾರಣಕ್ಕೆ ಈ ವರ್ಷ ಜಾನುವಾರು ಪ್ರದರ್ಶನ ಇರುವುದಿಲ್ಲ. ಕುರಿ ಹಾಗೂ ನಾಟಿ ಕೋಳಿ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮೇಳದಲ್ಲಿ ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಔಷಧೀಯ ಮತ್ತು ಸುಗಂಧ ದ್ರವ್ಯ ಸಸ್ಯ, ಜಲಾನಯನ ನಿರ್ವಹಣೆ, ಸಾವಯವ ಕೃಷಿ ಪದ್ಧತಿ, ಸಮಗ್ರ ಪೋಷಕಾಂಶಗಳು, ರೋಗ ನಿರ್ವಹಣೆ, ಹನಿ ಹಾಗೂ ತುಂತುರು ನೀರಾವರಿ ಪದ್ಧತಿ, ಮಳೆ ಮತ್ತು ಚಾವಣಿ ನೀರು ಸಂಗ್ರಹ ಯೋಜನೆಯ ಬಗ್ಗೆ ಮೇಳದಲ್ಲಿ ತಜ್ಞರಿಂದ ರೈತರಿಗೆ ಮಾಹಿತಿ ನೀಡಲಾಗುವುದು.

Also read  ಕೊಡಗಿನಿಂದ ದೂರ ಸರಿಯುತ್ತಿರುವ ಸಂಬಾರ ರಾಣಿ