ಕೇರಳ ಪ್ರವೇಶಿಸಿದ ಮುಂಗಾರು,ಜೂನ್ 2ಕ್ಕೆ ಕರ್ನಾಟಕ ತಲಪುವ ಸಾಧ್ಯತೆ
ನೈಋತ್ಯ ಮುಂಗಾರು ನಿಗದಿತ ಸಮಯಕ್ಕಿಂತ ಮೂರು ದಿನಗಳ ಮುಂಚಿತವಾಗಿ ಭಾನುವಾರ ಕೇರಳಕ್ಕೆ ಆಗಮಿಸಿದೆ ಮತ್ತು ಜೂನ್ 2 ರ ವೇಳೆಗೆ ಕರ್ನಾಟಕದ ಕೆಲವು ಭಾಗಗಳನ್ನು ತಲುಪುವ ಸಾಧ್ಯತೆಯಿದೆ, ಇದು ನಾಲ್ಕು ತಿಂಗಳ ಅವಧಿಯ ಸಾಮಾನ್ಯ ಮಳೆಗಾಲದ ಮುನ್ಸೂಚನೆಯಾಗಿದೆ.
ನೈಋತ್ಯ ಮಾನ್ಸೂನ್ ಅನ್ನು ಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿ ಎಂದು ಪರಿಗಣಿಸಲಾಗಿದ್ದು.ಕೇರಳ, ತಮಿಳುನಾಡು,ಹಿಮಾಲಯ,ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಬೆಳಿಗ್ಗೆ 8.30 ಕ್ಕೆ ದಾಖಲಿಸಿದ ಮಾಹಿತಿಯು ತೋರಿಸಿದೆ. ಕೇರಳದ 14 ಹವಾಮಾನ ಕೇಂದ್ರಗಳಲ್ಲಿ ಕನಿಷ್ಠ 10 ಮತ್ತು ಲಕ್ಷದ್ವೀಪ್‌ನ ಒಂದು ಕೇಂದ್ರವು 2.5 ಮಿಮೀ ಅಥವಾ ಅದಕ್ಕಿಂತ ಹೆಚ್ಚಿನ ಮಳೆಯಾಗಿದೆ , ಇದು ನೈಋತ್ಯ ಮಾನ್ಸೂನ್‌ನ ಪ್ರಾರಂಭದ ಲಕ್ಷಣವನ್ನು ತೋರಿಸುತ್ತದೆ ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೈರುತ್ಯ ಮುಂಗಾರು ಇದೇ 27ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಈ ಹಿಂದೆ ಹೇಳಿತ್ತು. ಕೇರಳದಲ್ಲಿ ಸಾಮಾನ್ಯವಾಗಿ ಜೂನ್ 1ಕ್ಕೆ ಮುಂಗಾರು ಆರಂಭವಾಗುವುದು ವಾಡಿಕೆ. ಮುಂದಿನ ಎರಡು ದಿನಗಳಲ್ಲಿ ಕೇರಳ, ಲಕ್ಷದೀಪದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ದಕ್ಷಿಣ ಭಾಗಗಳು ನಿರ್ದಿಷ್ಟವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ರಾಮನಗರ ಮತ್ತು ಬೆಂಗಳೂರು ಜಿಲ್ಲೆಗಳು ಮುಂಗಾರ ಅನ್ನು ಮೊದಲು ಸ್ವಾಗತಿಸಲಿವೆ ಎಂದುಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹವಾಮಾನ ತಜ್ಞರು ಜೂನ್ 2 ರಂದು ಈ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆಯನ್ನು ನೀಡಿದ್ದಾರೆ ,ಅಂದು 7-12 ಸೆಂ.ಮೀ ಮಳೆಯಾಗಬಹುದು ಎಂದು ಹೇಳಿದ್ದಾರೆ.ಜೂನ್ 10 ರ ವೇಳೆಗೆ ಇಡೀ ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.