Featured NewsWeather

ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ

ವಾತಾವರಣದಲ್ಲಿ ಗಾಳಿಯ ಒತ್ತಡ (ಟ್ರಫ್‌) ಕಡಿಮೆಯಾಗಿರುವುದರಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದ್ದು,ಮುಂದಿನ ಎರಡು ದಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ.

ಉತ್ತರ ತೆಲಂಗಾಣ ಮತ್ತು ಆಂಧ್ರಪ್ರದೇಶದ ಭಾಗಗಳಲ್ಲಿ ಶನಿವಾರ ಮತ್ತು ಭಾನುವಾರದಂದು ಮಳೆಯಾಗಿದೆ ಮತ್ತು ಇದರ ಪರಿಣಾಮವಾಗಿ ಕರ್ನಾಟಕದ ಪೂರ್ವ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮಳೆಯಾಗಿದೆ.ಅತ್ಯಧಿಕ ಅಂದರೆ  ಚಿತ್ರದುರ್ಗ ಹಿರಿಯೂರು ಯರಬಳ್ಳಿ ಯಲ್ಲಿ 60 ಮಿಮೀ .ಹೈದರಾಬಾದ್-ಕರ್ನಾಟಕ,ತೆಲಂಗಾಣ, ವಲಯದಲ್ಲಿ ಎರಡು ಅಥವಾ ಮೂರು ದಿನಗಳ ಕಾಲ 7.5 ಮಿಮೀ ಮಳೆ ಬೀಳಲಿದೆ ಎಂದು ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

ತುಂತುರು ಮಳೆಯಾಗುವ ಸಾಧ್ಯತೆ ಇದೆ. ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ. ಇನ್ನು ಎರಡು ದಿನ ಮೋಡ ಕವಿದ ವಾತಾವರಣ ಮುಂದುವರೆಯುವುದರಿಂದ ಚಳಿ ಪ್ರಮಾಣದಲ್ಲಿಯೂ ಇಳಿಕೆಯಾಗಲಿದೆ. 

ಕನಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡುಬರಲಿದೆ.ಜನವರಿ ಕೊನೆಯ ವಾರದಲ್ಲಿರುವುದರಿಂದ ಚಳಿ ಪ್ರಮಾಣ ಮುಂದಿನ ದಿನಗಳಲ್ಲಿ ಕಡಿಮೆ ಆಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಪ್ರಭು ತಿಳಿಸಿದ್ದಾರೆ.

Also read  Coffee prices up as global banking fears ease

Leave a Reply